ನವೆಂಬರ್ 1,2023ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿ ಐವತ್ತು ವರ್ಷಗಳು ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಕರ್ನಾಟಕ ಸಂಭ್ರಮ-50 ಎಂದು ವಿಶೇಷವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ನಮ್ಮ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನ ಕನ್ನಡ ವಿಭಾಗದಿಂದ ಸಹ ಪ್ರತಿವರ್ಷದಂತೆ ಈ ವರ್ಷವೂ ಇದೆ ನವೆಂಬರ್ 2ರಂದು ಕನ್ನಡ ರಾಜ್ಯೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.